ಬೆಳಗಾವಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ರವಿ ಬಂಗಾರಪ್ಪನವರ ರಾಮದುರ್ಗಕ್ಕೆ ಬೇಟಿ

WhatsApp Group Join Now

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಶನಿವಾರರಂದು ಬೆಳಗಾವಿಯ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ರವಿ ಬಂಗಾರಪ್ಪನವರ ರಾಮದುರ್ಗ ತಾಲೂಕಿನ ಬಟಕುರ್ಕಿ ಗ್ರಾಮ ಪಂಚಾಯತಿಗೆ ಬೇಟಿ ನೀಡಿ ಪಂಚಾಯತಿ ಅಭಿವೃದ್ದಿ ಅಧಿಕಾರಿಗೆ ಸ್ವಚ್ಚ ಭಾರತ ಅಭಿಯಾನ ಹಾಗೂ ನರೇಗಾ ಯೋಜನೆ ಕುರಿತು ಚರ್ಚಿಸಿದರು, ನಂತರ ಅಲ್ಲಿಯೇ ಸರಕಾರಿ ಪ್ರಾಥಮೀಕ ಶಾಲೆಗೆ ಬೇಟಿ ನೀಡಿ ಮಕ್ಕಳ ಜೋತೆ ಬಿಸಿಯೂಟ, ಹಾಗೂ ಸಮವಸ್ತ್ರ ಬಗ್ಗೆ ಚರ್ಚೆ ಮಾಡಿದರು. ನಂತರ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಶಾಲೆಯ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು,

ನಂತರ ಹಲಗತ್ತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗಣತಾಜ್ಯ ವಿಲೇವಾರಿ ಘಟಕವನ್ನು ಪರಿಶೀಲಿಸಿದರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಯವರಿಗೆ ಗ್ರಾಮದಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಬಗ್ಗೆ ಮುಂಜಾಗ್ರತ ಕ್ರಮವಹಿಸಲು ಸೂಚಿಸಿದರು, ನರೇಗಾ ಯೋಜನೆ ಕೂಲಿಕಾರರಿಂದ ಕೂಲಿ ಬೇಡಿಕೆ ಪಡೆದುಕೊಂಡು ಕೂಲಿಕಾರರಿಗೆ ಕೆಲಸ ನೀಡಲು ಸೂಚಿಸಿದರು,

ತಾಲೂಕು ಪಂಚಾಯಿತಿಯಲ್ಲಿ ಜರುಗಿದ ಜಮಾಬಂದಿ ಸಭೆಯ ಅಧ್ಯಕ್ಷತೆ ವಹಿಸಿ ತಾಲೂಕಿನ ಎಲ್ಲಾ ಇಲಾಖೆಗಳು ಹಾಗೂ ತಾಲೂಕು ಪಂಚಾಯಿತಿಯ ಖರ್ಚು ವೆಚ್ಚಗಳ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು ಹಾಗೂ ಸಲಹೆ ಸೂಚನೆಗಳನ್ನು ನೀಡಿದರು,

ತಾಲೂಕಿನ ವಿದ್ಯಾ ಚೇತನ ಶಾಲೆಯ ಗುರುಭವನದಲ್ಲಿ ಜರುಗಿದ ತಾಲೂಕಿನ ಎಲ್ಲ ಶಾಲಾಯ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಭಾಗವಹಿಸಿ ಶಾಲೆಯಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆ ಬಗ್ಗೆ ಮುಂಜಾಗ್ರತೆ ಕ್ರಮವಹಿಸಲು ಶಾಲೆಯ ಮುಖ್ಯೋಪಾಧ್ಯಾಯರು ಗಳಿಗೆ ಸೂಚಿಸಿದರು,

ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕ್ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಹಾಗೂ ಸಹಾಯಕ ನಿರ್ದೇಶಕರು ಶೇಖರ ಹಿರೇಸೋಮಣ್ಣವರ , ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಲಮಾಣಿ ಹಾಗೂ ವಿದ್ಯಾ ಗಣಪ,ಹಾಗೂ ತಾಪಂ ಆ,ಯಿ,ಸಿ ಸಂಯೋಜಕ ಕಲ್ಮೇಶ ಹಗೇದ,ತಾಂತ್ರಿಕ ಸಂಯೋಜಕ ಮಹೇಶ್ ತಳವಾರ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

About The Author