ಕೋಲಾರ.01: ನಗರದ ಕೋಲಾರಮ್ಮ ದೇವಾಲಯ ಹಾಗೂ ಸೋಮೇಶ್ವರ ದೇವಾಲಯಗಳಿಗೆ ಬರುವ ಭಕ್ತರು ಮತ್ತು ಪ್ರವಾಸಿಗರಿಗೆ ಶೌಚಾಲಯ ವ್ಯವಸ್ಥೆ ಇಲ್ಲದೇ ಪರದಾಡುವಂತಾಗಿದ್ದು ಕೊಡಲೇ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುವಂತೆ ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಕನ್ನಡಮಿತ್ರ ವೆಂಕಟಪ್ಪ ಕೋಲಾರ ನಗರದ ಅಧಿದೇವತೆ ಕೋಲಾರಮ್ಮ ದೇವಾಲಯ ಹಾಗೂ ಶಿಲ್ಪಕಲೆಯ ಸೊಬಗನ್ನು ಹೊಂದಿರುವ ಸೋಮೇಶ್ವರ ದೇವಾಲಯವನ್ನು ವೀಕ್ಷಿಸಲು ಪ್ರತಿನಿತ್ಯ ಸಾವಿರಾರು ಜನರು ಆಗಮಿಸುತ್ತಾರೆ. ಕೋಲಾರ ಜಿಲ್ಲೆ ಅಲ್ಲದೇ ನೆರೆಯ ಆಂಧ್ರ ಹಾಗೂ ತಮಿಳುನಾಡಿನಿಂದ ಸಹ ಸಾಕಷ್ಟು ಜನರು ಕೋಲಾರಮ್ಮ ತಾಯಿಯ ದರ್ಶನ ಪಡೆಯಲು ಆಗಮಿಸುತ್ತಾರೆ. ಇನ್ನೂ ತನ್ನ ವಾಸ್ತುಶಿಲ್ಪ ಕಲೆಯಿಂದ ಪ್ರವಾಸಿಗರನ್ನು ಸೆಳೆಯುವ ಸೋಮೇಶ್ವರ ದೇವಾಲಯ ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಜನರು ಬರುತ್ತಾರೆ, ಆದರೆ ಈ ಎರಡು ದೇವಾಲಯಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ದೇವಾಲಯಕ್ಕೆ ಬರುವ ಸಾರ್ವಜನಿಕರು ಪ್ರಮುಖವಾಗಿ ಮಹಿಳೆಯರು ತ್ರೀವ ತೊಂದರೆ ಅನುಭವಿಸುತ್ತಿದ್ದಾರೆ. ಈ ಎರಡು ದೇವಾಲಯಗಳು ಮುಜರಾಯಿ ಇಲಾಖೆಗೆ ಒಳ್ಳಪಟ್ಟಿದ್ದು ದೇವಾಲಯಗಳಿಂದ ಉತ್ತಮ ಆದಾಯ ಕೊಡ ಮುಜರಾಯಿ ಇಲಾಖೆಗೆ ಬರುತ್ತಿದೆ, ಇನ್ನೂ ಹಬ್ಬಹರಿದಿನಗಳು, ನವರಾತ್ರಿ, ಕೋಲಾರಮ್ಮ ದೇವಿಯ ಜನ್ಮದಿನ, ಮಹಾಶಿವರಾತ್ರಿ ಸೇರಿದಂತೆ ವಿಶೇಷ ದಿನಗಳಲ್ಲಿ ಕೋಲಾರಮ್ಮ ಮತ್ತು ಸೋಮೇಶ್ವರ ದೇವಾಲಯಗಳಿಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ, ಇಂತಹ ಸಂದರ್ಭಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದೇ ಜನರು ಸಾಕಷ್ಟು ಕಿರಿಕಿರಿ ಅನುಭವಿಸುತ್ತಾರೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆಯನ್ನು ಜನರು ದೂರವಂತಾಗಿದೆ. ಶೌಚಾಲಯ ನಿರ್ಮಾಣ ಮಾಡಲು ದೇವಾಲಯದಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದು ಕೊಡಲೇ ಶೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಶೌಚಾಲಯ ನಿರ್ಮಾಣ ಮಾಡಲು ಅನುಮತಿ ನೀಡಿದರೆ ನಮ್ಮ ಕನ್ನಡ ಸೇನೆವತಿಯಿಂದ ಎರಡು ದೇವಾಲಯಗಳಲ್ಲಿ ಸುಸಜ್ಜಿತವಾದ ಶೌಚಾಲಯ ನಿರ್ಮಾಣ ಮಾಡುತ್ತೇವೆ ಎಂದು ಕನ್ನಡ ಸೇನೆ ಮುಖಂಡರು ಜಿಲ್ಲಾಧಿಕಾರಿ ಆಕ್ರಂಪಾಷ ಅವರನ್ನು ಒತ್ತಾಯಿಸಿದ್ದಾರೆ. ಈ ವೇಳೆ ಕನ್ನಡ ಸೇನೆ ವೆಂಕಟಪ್ಪ, ಗೌರವ ಆಧ್ಯಕ್ಷರಾದ ವೆಂಕಟಕೃಷ್ಣಪ್ಪ, ಕರ್ನಾಟಕ ಮಾನವ ಹಕ್ಕುಗಳ ಸಮಿತಿ ರಾಜ್ಯಧ್ಯಕ್ಷರಾದ ಕೆ.ಸಿ ಸಂತೋಷ, ಮಾನವ ಹಕ್ಕುಗಳ ಜಿಲ್ಲಾ ಸಮಿತಿ ಅಧ್ಯಕ್ಷರಾದ ಟಮಕ ಶ್ರೀನಾಥ್, ಕನ್ನಡ ಸೇನೆ ನಗರಾಧ್ಯಕ್ಷ ನಾಗೇಶ್: ಕನ್ನಡ ಸೇನೆ ನಗರ ಸಂಚಾಲಕರಾದ ನವೀನ ಉಪಸ್ಥಿತರಿದ್ದರು….